You are now leaving GSK’s website and are going to a website that is not operated/controlled by GSK. Though we feel it could be useful to you,we are not responsible for the content/service or availability of linked sites. You are therefore mindful of these risks and have decided to go ahead.

Agree Agree Agree Stay
ಭಾಷೆ ಬದಲಾಯಿಸಿ
Shingles
ಭಾಷೆ ಬದಲಾಯಿಸಿ

ಟೈಫಾಯಿಡ್ ಅಥವಾ ಟೈಫಾಯಿಡ್ ಜ್ವರ ಒಂದು ಜೀವಕ್ಕೆ ಮಾರಕ ರೋಗವಾಗಿದ್ದು ಇದು ಕಡಿಮೆ ನೈರ್ಮಲ್ಯವಿರುವ ಸ್ಥಳಗಳಲ್ಲಿ ಬಹಳ ಸಾಮಾನ್ಯವಾಗಿದೆ. ಸುರಕ್ಷಿತ ಮತ್ತು ಶುದ್ಧ ನೀರಿನ ಸೌಲಭ್ಯ, ಅಡುಗೆ ಮಾಡುವವರು ಉತ್ತಮ ನೈರ್ಮಲ್ಯ ಮತ್ತು ಸರಿಯಾದ ನೈರ್ಮಲ್ಯ ಕಾಪಾಡಿಕೊಳ್ಳುವುದರಿಂದ ಇದನ್ನು ತಡೆಗಟ್ಟಬಹುದು. ಇದನ್ನು ಟೈಫಾಯಿಡ್ ಕಾಂಜುಗೇಟ್ ಲಸಿಕೆ(ಟಿಸಿವಿ) ಸಹಾಯದಿಂದಲೂ ಸಹ ತಪ್ಪಿಸಬಹುದು.

ಐಎಪಿ* ಇಂದ ಲಸಿಕಾ ವೇಳಾಪಟ್ಟಿಯನ್ನು ಅನುಸರಿಸಲಾಗುತ್ತಿದೆ. ಲಸಿಕೆ(ವ್ಯಾಕ್ಸಿನೇಷನ್) ಮತ್ತು ಇಮ್ಮ್ಯುನೈಸೇಷನ್ ಸಲಹಾ ಸಮಿತಿ ಅಭ್ಯಾಸಗಳು(ಐಸಿವಿಐಪಿ)*ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್
ಒಂದುವೇಳೆ ನೀವು ಲಸಿಕೆಯನ್ನು(ವ್ಯಾಕ್ಸಿನೇಷನ್) ಮರೆತರೆ ಏನು ಮಾಡಬೇಕು?
ಕ್ಯಾಚ್ ಅಪ್ ಲಸಿಕೆ(ವ್ಯಾಕ್ಸಿನೇಷನ್)

ಒಂದುವೇಳೆ ನೀವು ಯಾವುದೇ ಲಸಿಕೆಗಳನ್ನು ನಿರ್ದಿಷ್ಟ ಸಮಯದಲ್ಲಿ ಹಾಕಿಸುವುದನ್ನು ಮರೆತಾಗ ಕ್ಯಾಚ್ ಅಪ್ ಲಸಿಕೆ(ವ್ಯಾಕ್ಸಿನೇಷನ್) ಗಾಗಿ ನಿಮ್ಮ ವೈದ್ಯರನ್ನು ಭೇಟಿಮಾಡಿ.

ನಿಮಗಿದು ಗೊತ್ತೇ?
  • ಭಾರತ ದೇಶವು ಟೈಫಾಯಿಡ್ ಸಾಮಾನ್ಯವಾಗಿರುವ ದೇಶಗಳಲ್ಲಿ ಒಂದಾಗಿದೆ.
  • ಅಂದಾಜು 11-20 ಮಿಲಿಯನ್ ಜನರು ಟೈಫಾಯಿಡ್ ನಿಂದ ಬಳಲುತ್ತಾರೆ ಮತ್ತು 1.2-1.6 ಲಕ್ಷ ಜನರು ಇದರ ಕಾರಣ ಪ್ರತಿ ವರ್ಷ ಸಾಯುತ್ತಾರೆ.
ಇನ್ನು ತಡ ಮಾಡಬೇಡಿ!

ಇಂದೇ ಟೈಫಾಯಿಡ್ ಕಾಂಜುಗೇಟ್ ಲಸಿಕೆ(ವ್ಯಾಕ್ಸಿನೇಷನ್) ಬಗ್ಗೆ ನಿಮ್ಮ ವೈದ್ಯರೊಂದಿಗೆ ಮಾತನಾಡಿ.

ಟೈಫಾಯಿಡ್ ಕಾಂಜುಗೇಟ್ ಲಸಿಕೆ(ಟಿಸಿವಿ) ಜೊತೆ ಸಂಬಂಧಿಸಿದ ಸಾಮಾನ್ಯ ಅಡ್ಡಪರಿಣಾಮಗಳು ಯಾವುವು?

ಇನ್ಯಾಕ್ಟಿವೇಟೆಡ್ ಕಾಂಜುಗೇಟ್ ಲಸಿಕೆ(ಟಿಸಿವಿ) ಹಾಕಿಸಿದ ನಂತರ ಕಂಡುಬರುವ ಸಾಮಾನ್ಯ ಅಡ್ಡ ಪರಿಣಾಮಗಳೆಂದರೆ:

  • ಸೂಜಿ ಚುಚ್ಚಿದ ಜಾಗದಲ್ಲಿ ನೋವು
  • ಸೂಜಿ ಚುಚ್ಚಿದ ಜಾಗದಲ್ಲಿ ಊತ ಅಥವಾ ಕೆಂಪಗಾಗುವುದು
  • ಜ್ವರ
  • ತಲೆನೋವು
  • ಸಾಮಾನ್ಯ ಅನಾರೋಗ್ಯ

ಅಡ್ಡ ಪರಿಣಾಮಗಳ ಕುರಿತು ಹೆಚ್ಚಿನ ವಿವರಗಳಿಗಾಗಿ, ದಯವಿಟ್ಟು ನಿಮ್ಮ ವೈದ್ಯರನ್ನು ಭೇಟಿ ಮಾಡಿ.

ನಿಮ್ಮ ಮಗು ಯಾವಾಗ ಟೈಫಾಯಿಡ್ ಲಸಿಕೆಯನ್ನು(ಟಿಸಿವಿ) ಪಡೆಯಬಹುದು?

ಮಕ್ಕಳು 6 ರಿಂದ 9 ತಿಂಗಳ ನಡುವೆ ಒಂದು ಡೋಸ್ ಲಸಿಕೆಯನ್ನು ಪಡೆಯಬೇಕು.

ಒಂದುವೇಳೆ ಯಾವುದೇ ಮಗುವು 9 ತಿಂಗಳವರೆಗೆ ಲಸಿಕೆಯ ಡೋಸ್ ಪಡೆದುಕೊಂಡಿಲ್ಲವೆಂದಾದರೆ, ನೀವು ಕ್ಯಾಚ್-ಅಪ್ ಲಸಿಕೆಗಾಗಿ ನಿಮ್ಮ ವೈದ್ಯರನ್ನು ಭೇಟಿಮಾಡಿ.

ಅದಾಗಿಯೂ ಹೆಚ್ಚಿನ ಮಾಹಿತಿಗಾಗಿ ನಿಮ್ಮ ವೈದ್ಯರನ್ನು ಒಮ್ಮೆ ಭೇಟಿ ಮಾಡಿ.

ಟೈಫಾಯಿಡ್ ನ ಲಕ್ಷಣಗಳು ಮತ್ತು ಅದರಿಂದಾಗಬಹುದಾದ ಗಂಭೀರ ಪರಿಣಾಮಗಳು ಯಾವುವು?

ಟೈಫಾಯಿಡ್ ಲಕ್ಷಣಗಳೆಂದರೆ :

  • ದೀರ್ಘ ಸಮಯದ ತೀವ್ರ ಜ್ವರ
  • ಆಯಾಸ
  • ತಲೆ ನೋವು
  • ಕೆಮ್ಮು
  • ವಾಕರಿಕೆ
  • ಹೊಟ್ಟೆ ನೋವು
  • ಅತಿಸಾರ ಭೇದಿ ಅಥವಾ ಮಲಬದ್ಧತೆ
  • ಹಸಿವು ಇಲ್ಲದಿರುವುದು

ಕೆಲವರಲ್ಲಿ ಸಣ್ಣ ಸಣ್ಣ ಗುಳ್ಳೆಗಳೂ ಸಹ ಕಾಣಿಸಿಕೊಳ್ಳಬಹುದು. ಸರಿಯಾಗಿ ಚಿಕಿತ್ಸೆ ಪಡೆಯದ ರೋಗಿಗಳು ವಾರಗಟ್ಟಲೆ ಅಥವಾ ತಿಂಗಳುಗಟ್ಟಲೆ ಜ್ವರದಿಂದ ಬಳಲುತ್ತಾರೆ. ತೀವ್ರ ಸ್ವರೂಪದ ಟೈಫಾಯಿಡ್ ಜ್ವರದಿಂದ ಗಂಭೀರ ಪರಿಣಾಮಗಳು ಉಂಟಾಗಿ ಜೀವಕ್ಕೆ ಮಾರಕವಾಗಬಹುದು.

ಟೈಫಾಯಿಡ್ ಹೇಗೆ ಹರಡುತ್ತದೆ?

ಟೈಫಾಯಿಡ್ ಸಾಮಾನ್ಯವಾಗಿ ಕಲುಷಿತ ಆಹಾರ ಮತ್ತು ನೀರಿನಿಂದ ಹರಡುತ್ತದೆ. ಆದ್ದರಿಂದ ಕೊಳಕು ಸ್ಥಳಗಳಲ್ಲಿ ಮತ್ತು ಅಶುದ್ಧ ಕುಡಿಯುವ ನೀರು ಇದ್ದ ಸ್ಥಳಗಳಲ್ಲಿ ಟೈಫಾಯಿಡ್ ಬರುವ ಸಾಧ್ಯತೆಯು ಬಹಳ ಹೆಚ್ಚಿರುತ್ತದೆ.

ಟೈಫಾಯಿಡ್ ಎಂದರೇನು?

ಟೈಫಾಯಿಡ್ ಒಂದು ಮಾರಣಾಂತಿಕ ಪ್ರಮಾಣ ದಲ್ಲಿನ ಸೋಂಕಾಗಿದ್ದು ಸಾಲ್ಮೊನೆಲ್ಲಾ ಟೈಫಿ ಎನ್ನುವ ಬ್ಯಾಕ್ಟೀರಿಯಾದಿಂದ ಉಂಟಾಗುತ್ತದೆ. ಈ ರೋಗವು ವಿಶ್ವದಾದ್ಯಂತ ಕೋಟ್ಯಂತರ ಜನರ ಮೇಲೆ ಪರಿಣಾಮ ಬೀರಿದೆ.

ಪದೇ ಪದೇ ಕೇಳಲಾಗುವ ಪ್ರಶ್ನೆಗಳು

ಟೈಫಾಯಿಡ್ ಹೇಗೆ ತಡೆಗಟ್ಟಬಹುದು?

ಟೈಫಾಯಿಡ್ ಬರುವ ಹೆಚ್ಚಿನ ಸಾಧ್ಯತೆಗಳನ್ನು ತಡೆಗಟ್ಟಲು ಟೈಫಾಯಿಡ್ ಕಾಂಜುಗೇಟ್ ಲಸಿಕೆ(ಟಿಸಿವಿ) ಹಾಕಿಸುವುದು ಬಹಳ ಪರಿಣಾಮಕಾರಿಯಾಗಿದೆ.

ಲಸಿಕೆಯನ್ನು ಹೊರತುಪಡಿಸಿ, ನೀವು ಸರಿಯಾದ ಹಾಗೂ ಉತ್ತಮ ನೈರ್ಮಲ್ಯ ಹಾಗೂ ಸ್ಯಾನಿಟೈಸೇಶನ್ ಪಾಲಿಸಬೇಕು ಮತ್ತು ಶುದ್ಧ ಕುಡಿಯುವ ನೀರನ್ನು ಸೇವಿಸಬೇಕು.

ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಸಾರ್ವಜನಿಕ ಜಾಗೃತಿ ಉಪಕ್ರಮ. ಡಾ. ಅನ್ನಿ ಬೆಸೆಂಟ್ ರಸ್ತೆ, ವರ್ಲಿ, ಮುಂಬೈ 400 030, ಭಾರತ.

ಈ ಕೈಪಿಡಿಯಲ್ಲಿ ಸಿಗುವ ಮಾಹಿತಿಯು ಕೇವಲ ಸಾಮಾನ್ಯ ಜಾಗೃತಿ ಉದ್ದೇಶಗಳಿಗಾಗಿ ಮಾತ್ರ ಆಗಿರುತ್ತದೆ. ಇದರಲ್ಲಿರುವ ಯಾವುದೇ ವಿಷಯವು ವೈದ್ಯರ ಸಲಹೆಯಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಸಂಬಂಧಿತ ವಿಚಾರಣೆಗಳಿಗಾಗಿ, ಯಾವುದೇ ಪ್ರಶ್ನೆಗಳಿಗಾಗಿ ಅಥವಾ ಸಂದೇಹಗಳಿಗಾಗಿ ನಿಮ್ಮ ವೈದ್ಯರನ್ನು ಭೇಟಿಯಾಗಿ. ಲಸಿಕೆಗೆ ಪಟ್ಟಿ ಮಾಡಿರುವ ಕಾಯಿಲೆಗಳು ಇಲ್ಲಿ ಪೂರ್ಣವಾಗಿಲ್ಲ, ಸಂಪೂರ್ಣ ಲಸಿಕಾ ವೇಳಾಪಟ್ಟಿಗಾಗಿ ನಿಮ್ಮ ಮಗುವಿನ ವೈದ್ಯರನ್ನು ಭೇಟಿ ಮಾಡಿ. ಈ ಕೈಪಿಡಿಯಲ್ಲಿ ತೋರಿಸಲಾಗುವ ವೈದ್ಯರು ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಯಲ್ಲಿ ಒಬ್ಬ ನಟ ಆಗಿರುತ್ತಾರೆ. ರೋಗ ಪ್ರತಿನಿಧಿಸುವ ಚಿತ್ರಗಳು/ ಐಕಾನ್ ಗಳು ಮತ್ತು ಅನಿಮೇಷನ್ ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ.

ನಿಮ್ಮ ಮಗುವಿನ ರಕ್ಷಣೆಯಲ್ಲಿನ ಅಂತರಗಳನ್ನು ಗುರುತಿಸಿ

ನಿಮ್ಮ ಮಗುವಿನ ಮರೆತಿರುವ ಲಸಿಕೆಯನ್ನು ನೋಡಲು ಒಂದು ವಯಕ್ತಿಕಗೊಳಿಸಲಾದ ಟೈಮ್ ಲೈನ್ ರಚಿಸಿ *

ಈಗಲೇ ಬಳಸಲು ಆರಂಭಿಸಿ >

2021(c) ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್. ಎಲ್ಲಾ ಹಕ್ಕುಗಳ ಮೀಸಲು
ಗೌಪ್ಯತಾ ನೀತಿ | ಕುಕೀಸ್ ನೀತಿ | ಹಕ್ಕು ನಿರಾಕರಣೆ

ಹಕ್ಕು ನಿರಾಕರಣೆ:
ಈ ವೆಬ್ಸೈಟ್ ಭಾರತೀಯ ನಿವಾಸಿಗಳಿಗೆ ಮಾತ್ರ.
ಇಲ್ಲಿ ಉಲ್ಲೇಖಿಸಲಾದ ರೋಗಗಳ ಪಟ್ಟಿಯು ಐಎಪಿ(ಇಂಡಿಯನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್) ಅವರ ದಿನನಿತ್ಯದ ಮತ್ತು ಕ್ಯಾಚ್‌ಅಪ್ ಲಸಿಕೆ(ವ್ಯಾಕ್ಸಿನೇಷನ್) ಶಿಫಾರಸುಗಳಲ್ಲಿ ತಡೆಗಟ್ಟಬಹುದಾದ ರೋಗಗಳ ಪಟ್ಟಿಯಲ್ಲಿ ಸೇರಿಕೊಂಡಿರುವ ಕಾಯಿಲೆಗಳು. ಈ ಪಟ್ಟಿಯ ಹೊರತಾಗಿರುವ ಕಾಯಿಲೆಗಳು ನಿಮ್ಮ ಮಗುವಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದಯವಿಟ್ಟು ನಿಮ್ಮ ಮಕ್ಕಳ ವೈದ್ಯರನ್ನು ಸಂಪರ್ಕಿಸಿ.
ಗ್ಲಾಕ್ಸೊ ಸ್ಮಿತ್‌ಕ್ಲೈನ್ ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್‌ನಿಂದ ಸಾರ್ವಜನಿಕ ಜಾಗೃತಿ ಉಪಕ್ರಮ. ಡಾ. ಅನ್ನಿ ಬೆಸೆಂಟ್ ರಸ್ತೆ, ವರ್ಲಿ, ಮುಂಬೈ 400 030, ಭಾರತ ಈ ಕೈಪಿಡಿಯಲ್ಲಿ ಸಿಗುವ ಮಾಹಿತಿಯು ಕೇವಲ ಸಾಮಾನ್ಯ ಜಾಗೃತಿ ಉದ್ದೇಶಗಳಿಗಾಗಿ ಮಾತ್ರ ಆಗಿರುತ್ತದೆ. ಇದರಲ್ಲಿರುವ ಯಾವುದೇ ವಿಷಯವು ವೈದ್ಯರ ಸಲಹೆಯಲ್ಲ. ಇದಕ್ಕೆ ಸಂಬಂಧಿಸಿದಂತೆ ಯಾವುದೇ ವೈದ್ಯಕೀಯ ಸಂಬಂಧಿತ ವಿಚಾರಣೆಗಳಿಗಾಗಿ, ಯಾವುದೇ ಪ್ರಶ್ನೆಗಳಿಗಾಗಿ ಅಥವಾ ಸಂದೇಹಗಳಿಗಾಗಿ ನಿಮ್ಮ ವೈದ್ಯರನ್ನು ಭೇಟಿಯಾಗಿ. ಲಸಿಕೆಗೆ ಪಟ್ಟಿ ಮಾಡಿರುವ ಕಾಯಿಲೆಗಳು ಇಲ್ಲಿ ಪೂರ್ಣವಾಗಿಲ್ಲ, ಸಂಪೂರ್ಣ ಲಸಿಕಾ ವೇಳಾಪಟ್ಟಿಗಾಗಿ ನಿಮ್ಮ ಮಗುವಿನ ವೈದ್ಯರನ್ನು ಭೇಟಿ ಮಾಡಿ. ಈ ಕೈಪಿಡಿಯಲ್ಲಿ ತೋರಿಸಲಾಗುವ ವೈದ್ಯರು ಕೇವಲ ಪ್ರಾತಿನಿಧ್ಯ ಉದ್ದೇಶಗಳಿಗಾಗಿ ಮಾತ್ರ ಮತ್ತು ವೃತ್ತಿಯಲ್ಲಿ ಒಬ್ಬ ನಟ ಆಗಿರುತ್ತಾರೆ.
ಸಿಎಲ್ ಕೋಡ್: NP-IN-ABX-WCNT-210003, DoP ಡಿಸೆಂಬರ್ 2021

ಹಂಚಿರಿ
ಹಂಚಿಕೊಳ್ಳಿ
Vaccination Tracker